ಮಾನ್ವಿ: ಅತಿವೃಷ್ಟಿಯಿಂದ ಸಂಭವಿಸಿದ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಹಾಗೂ ಸದಸ್ಯರು ಸೋಮವಾರ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹೀದ್ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನಲ್ಲಿ ಈಚೆಗೆ ಅತಿವೃಷ್ಟಿಯಿಂದ ಹತ್ತಿ, ತೊಗರಿ ಸೇರಿದಂತೆ ಶೇ 90ರಷ್ಟು ವಿವಿಧ ಬೆಳೆಗಳು ಹಾಳಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದುವರೆಗೂ ಅಧಿಕಾರಿಗಳು ಶೇ 50ರಷ್ಟು ಬೆಳೆಹಾನಿ ಕುರಿತು ಸಮೀಕ್ಷೆ ನಡೆಸಿಲ್ಲ. ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ತಾಲ್ಲೂಕಿನ ಎಲ್ಲಾ ರೈತರ ಬೆಳೆಹಾನಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ನೀಡಬೇಕು. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪ್ರತಿ ಹೆಕ್ಟೇರ್‌ಗೆ ₹ 17 ಸಾವಿರ ಪರಿಹಾರವನ್ನು ರೈತರಿಗೆ ವಿತರಿಸಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ವೀರಭದ್ರಗೌಡ ಭೋಗಾವತಿ, ರೈತ ಮೋರ್ಚಾ ಅಧ್ಯಕ್ಷ ರುದ್ರಗೌಡ ಮದ್ಲಾಪುರ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶಿವಲಿಂಗಯ್ಯಸ್ವಾಮಿ, ಇತರ ಪದಾಧಿಕಾರಿಗಳಾದ ಶರಣಯ್ಯಸ್ವಾಮಿ ಕಾತರಕಿ, ಜೆ.ಸುಧಾಕರ, ಗುರುಸಿದಪ್ಪ ಕಣ್ಣೂರು, ಹನುಮೇಶ ನಾಯಕ ಜೀನೂರು ವೀರನಗೌಡ ಪೋತ್ನಾಳ, ಕುಮಾರಸ್ವಾಮಿ ಮೇದಾ, ವೀರೇಶನಾಯಕ ಬೆಟ್ಟದೂರು, ಚಂದ್ರು ನಾಯಕ, ಶ್ರೀಕಾಂತ ಪಾಟೀಲ ಗೂಳಿ, ಚಂದ್ರು ಜಾನೇಕಲ್, ನರಸಪ್ಪ ಜೂಕೂರು, ಬಸವರಾಜ ನಕ್ಕುಂದಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.