ADVERTISEMENT

ಮಾನ್ವಿ: ಮೇಲ್ಸೇತುವೆ ನೀರ್ಮಾಣ ಮಾಡಲು ಒತ್ತಾಯ

ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 6:48 IST
Last Updated 9 ಆಗಸ್ಟ್ 2025, 6:48 IST
ಮಾನ್ವಿಯಲ್ಲಿ ಮಂಗಳವಾರ ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು
ಮಾನ್ವಿಯಲ್ಲಿ ಮಂಗಳವಾರ ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು   

ಮಾನ್ವಿ: ಪಟ್ಟಣದ ವ್ಯಾಪ್ತಿಯಲ್ಲಿ ಮೂರು ಕಡೆ ಮೇಲ್ಸೇತುವೆಗಳ‌ ನಿರ್ಮಾಣಕ್ಕೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಮೂಲಕ ಹಾದುಹೋಗಿರುವ ಕಲ್ಮಲಾ ಜಂಕ್ಷನ್‌ದಿಂದ ಸಿಂಧನೂರುವರೆಗೆ 78.65 ಕಿ.ಮೀ ರಾಜ್ಯ ಹೆದ್ದಾರಿ ಚತುಷ್ಪಥ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ.

ಈ ಕಾಮಗಾರಿ ಅಡಿಯಲ್ಲಿ ಪಟ್ಟಣದ ಜನನಿಬಿಡ, ಸಾರ್ವಜನಿಕರ ಸಂಚಾರ ಹೆಚ್ಚಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಮಹರ್ಷಿ ವಾಲ್ಮೀಕಿ ವೃತ್ತ ಹಾಗೂ ಬಸವ ವೃತ್ತಗಳಲ್ಲಿ ಮೇಲ್ಸೇತುವೆಗಳ ನಿರ್ಮಾಣ ಮಾಡಬೇಕು. ಇದರಿಂದ ವೃದ್ಧರು, ಮಹಿಳೆಯರು ಶಾಲಾ ಮಕ್ಕಳು ಸುಗಮವಾಗಿ ರಸ್ತೆ ದಾಟಲು ಸಾಧ್ಯ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಕಾಮಗಾರಿ ಗುತ್ತಿಗೆ ಪಡೆದಿರುವ ಸಂಸ್ಥೆಗೆ ಸೂಚನೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ADVERTISEMENT

ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಇತರ ಪದಾಧಿಕಾರಿಗಳಾದ ದೊಡ್ಡಪ್ಪ ಹೂಗಾರ, ಗಂಗಾಧರ ರಾವ್, ಜಲಾಲ್ ಶಾಸ್ತ್ರೀ ಕ್ಯಾಂಪ್, ಗುರುರಾಜ ಕುಲಕರ್ಣಿ, ರೇಣುಕರಾಜ್, ಮಲ್ಲನಗೌಡ ಬೈಲಮರ್ಚೇಡ್, ವೆಂಕೋಬ ಯಾದವ್, ಈರೇಶ ಮಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.