
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಮಾನ್ವಿ: ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಗುರುವಾರ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ಖಾಸಿಂ ಬಿ (26) ಎಂದು ಗುರುತಿಸಲಾಗಿದೆ.
ಮೃತ ಮಹಿಳೆಯ ಕುಟುಂಬದ ಸದಸ್ಯರು ನೀಡಿದ ದೂರಿನ ಅನ್ವಯ ಮೃತಳ ಪತಿಯ ಕುಟುಂಬಕ್ಕೆ ಸೇರಿದ 6 ಜನರ ವಿರುದ್ಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪೊಲೀಸರು ಆರೋಪಿಗಳಾದ ಮೃತಳ ಪತಿ ಸಣ್ಣ ಖಾಸಿಂ ಹಾಗೂ ಪತಿಯ ಸಹೋದರ ದೊಡ್ಡ ಖಾಸಿಂ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪಿಐ ಸೋಮಶೇಖರ ಎಸ್.ಕೆಂಚರೆಡ್ಡಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.