ಮಾನ್ವಿ: 2025-26ನೇ ಸಾಲಿನಲ್ಲಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ https://sw.kar.nic.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಎರಡು ಪ್ರತಿಗಳನ್ನು ದೃಢೀಕರಿಸಿದ ಇತರ ದಾಖಲೆಗಳೊಂದಿಗೆ ಪಟ್ಟಣದ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನಟರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.