ಮಾನ್ವಿ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಒತ್ತಾಯಿಸಿ ಪುನೀತ್‌ರಾಜ್ ಕುಮಾರ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಗುರುವಾರ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿವೆ. ವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಭಯದಿಂದ ಅಡ್ಡಾಡುವಂತಾಗಿದೆ. ಪುರಸಭೆಯ ಅಧಿಕಾರಿಗಳು ಕೂಡಲೇ ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ರೇಣುಕರಾಜ್, ಗೌರವಾಧ್ಯಕ್ಷ ಕೆ.ಸಾಜೀದ್ ಪಾಷ, ಪದಾಧಿಕಾರಿಗಳಾದ ವೀರೇಶ, ವೀರೇಶ ನಾಯಕ, ದುರುಗಪ್ಪ, ರಂಗನಾಥ, ಹನುಮಂತ, ಬಸವರಾಜ, ವಿಶ್ವನಾಥ, ವೆಂಕಟೇಶ, ಗಣೇಶ, ಕೊಂಡಯ್ಯ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.