ಮಾನ್ವಿ: ‘ಕಲ್ಮಠದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಹೆಚ್ಚಿನ ಸಾಧನೆಗೆ ಪ್ರೇರಣೆ ನೀಡುತ್ತದೆ’ ಎಂದು ಮಾಜಿ ಸಚಿವ ಕೆ.ಶಿವನಗೌಡ ನಾಯಕ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ಧ್ಯಾನ ಮಂದಿರದ ಆವರಣದಲ್ಲಿ ಮಂಗಳವಾರ ಕಲ್ಮಠದ ದಸರಾ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ,‘ಇಂಥ ಕೆಲಸಗಳು ನಿರಂತವಾಗಿ ನಡೆಯಬೇಕು’ ಎಂದರು.
ವ್ಯಕ್ತಿತ್ವ ವಿಕಸನದ ಕುರಿತು ಉಪನ್ಯಾಸ ನೀಡಿದ ಶಿಕ್ಷಣ ತಜ್ಞ ಮಹೇಶ್ ಮಾಶಾಳ ಮಾತನಾಡಿ,‘ಇಂದಿನ ದಿನಗಳಲ್ಲಿ ಜ್ಞಾನಕ್ಕೆ ಹೆಚ್ಚು ಬೇಡಿಕೆ ಇರುವುದರಿಂದ ಯುವ ಸಮೂಹ ಜ್ಞಾನ ಪಡೆಯುವ ಎಲ್ಲಾ ಅವಕಾಶಗಳನ್ನು ಮುಕ್ತವಾಗಿರಿಸಿಕೊಂಡಾಗ ಮಾತ್ರ ಜೀವನದಲ್ಲಿ ಉನ್ನತ ಸಾಧನೆ ಸಾಧ್ಯ’ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಮೋಘ ಸೇವೆಗಾಗಿ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕಿ ಆರ್.ಇಂದಿರಾ ಅವರಿಗೆ ಸುವರ್ಣ ದಸರಾ ಸಾಧಕಿ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗುಡೂರು ಇಲಕಲ್ ಹಿರೇಮಠದ ಅನ್ನದಾನಸ್ವಾಮಿ ಶ್ರೀದೇವಿ ಪುರಾಣ ಪ್ರವಚನ ನೀಡಿದರು.
ವಿಶ್ವೇಶ್ವರಯ್ಯ ಹಿರೇಮಠ ಸಂಗೀತ ಸೇವೆ ನೀಡಿದರು. ಸಿದ್ದಯ್ಯಸ್ವಾಮಿ ತಬಲಾ ಸಾಥ್ ನೀಡಿದರು.
ಕಲ್ಮಠದ ಪೀಠಾಧ್ಯಕ್ಷ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು, ನೀಲಗಲ್ ಬೃಹನ್ಮಠದ ರೇಣುಕ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.