
ಸಿಂಧನೂರು: ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂರು ಜನರನ್ನು ಸಿಂಧನೂರು ಶಹರ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ನಗರದಲ್ಲಿ ಇತ್ತೀಚೆಗೆ ಗಾಂಜಾ ಪ್ರಕರಣಗಳು ಹೆಚ್ಚಾಗಿ ವರದಿ ಆಗುತ್ತಿರುವುದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮತ್ತು ಜಿ.ಹರೀಶ್, ಸಿಂಧನೂರು ಡಿವೈಎಸ್‍ಪಿ ಜಿ.ಚಂದ್ರಶೇಖರ ನೇತೃತ್ವದಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ವೀರಾರೆಡ್ಡಿ ಎಚ್ ಮತ್ತು ಸಿಬ್ಬಂದಿ ಒಳಗೊಂಡು ಮಾದಕ ದ್ರವ್ಯ ನಿಗ್ರಹ ಪಡೆ ರಚಿಸಲಾಗಿತ್ತು.
ಈ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಶುಕ್ರವಾರ ಆರೋಪಿಗಳಾದ ಯಂಕಪ್ಪ, ಆದಿತ್ಯ, ಮಂಜುನಾಥ ಅವರನ್ನು ಬಂಧಿಸಿ, ಅವರಿಂದ ₹ 50 ಸಾವಿರ ಬೆಲೆ ಬಾಳುವ 672 ಗ್ರಾಂ ಗಾಂಜಾ, ₹ 20 ಸಾವಿರ ಬೆಲೆಬಾಳುವ ಒಂದು ಬೈಕ್ ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿಯ ಪತ್ತೆ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.