ADVERTISEMENT

ಮಸ್ಕಿ | ಪೊಲೀಸರ ಮೇಲೆ ಹಲ್ಲೆ: ಬಂಧನ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 14:14 IST
Last Updated 11 ಜನವರಿ 2024, 14:14 IST
<div class="paragraphs"><p>ಬಂಧನ</p></div>

ಬಂಧನ

   

ಮಸ್ಕಿ: ಕಳ್ಳತನ ಪ್ರಕರಣದ ವಿಚಾರಣೆಗೆ ಬಂದಿದ್ದ ಬಳಗಾನೂರು ಠಾಣೆಯ ಇಬ್ಬರು ಪೊಲೀಸ್ ಕಾನ್‌ಸ್ಟಬಲ್‌ಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಪಟ್ಟಣದ ಮಲ್ಲೇಶಿ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ.

‘ಇನ್ನೂ 5 ಜನರ ಬಂಧನಕ್ಕೆ ತನಿಖಾ ತಂಡ ಚುರುಕು ಕಾರ್ಯಾಚರಣೆ ನಡೆಸಿದೆ:’ ಎಂದು ಸಬ್‌ ಇನ್‌ಸ್ಪೆಕ್ಟರ್ ದಾದಾವಲಿ ಪ್ರಜಾವಾಣಿ ತಿಳಿಸಿದ್ದಾರೆ.

ADVERTISEMENT

ಘಟನೆಗೆ ಸಂಬಂಧಿಸಿದಂತೆ 6 ಜನರ ಮೇಲೆ ತಾಲ್ಲೂಕಿನ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಟ್ಟಣದ ವಾಲ್ಮೀಕಿ ವೃತ್ತದ ಬಳಿ ಸಂಜೆ ವೇಳೆ ಇಬ್ಬರು ಪೊಲೀಸರ ಮೇಲೆ 6 ಜನರ ತಂಡ ಹಲ್ಲೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.