ADVERTISEMENT

‘ಹಿಂದುಳಿದ ಸಮುದಾಯದ ಪ್ರಗತಿಗೆ ಆದ್ಯತೆ’-ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 15:36 IST
Last Updated 9 ಏಪ್ರಿಲ್ 2021, 15:36 IST
ಮಡಿವಾಳ ಸಮುದಾಯದ ಸಭೆಯಲ್ಲಿ   ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಅವರಿಗೆ ಮಡಿವಾಳ ಸಮುದಾಯದವರು ಖಡ್ಗ ನೀಡಿ ಸನ್ಮಾನಿಸಿದರು. ಡಿ.ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘುಕೌಟಿಲ್ಯ ಹಾಗೂ ಪ್ರಮುಖರು ಇದ್ದಾರೆ
ಮಡಿವಾಳ ಸಮುದಾಯದ ಸಭೆಯಲ್ಲಿ   ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಅವರಿಗೆ ಮಡಿವಾಳ ಸಮುದಾಯದವರು ಖಡ್ಗ ನೀಡಿ ಸನ್ಮಾನಿಸಿದರು. ಡಿ.ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘುಕೌಟಿಲ್ಯ ಹಾಗೂ ಪ್ರಮುಖರು ಇದ್ದಾರೆ   

ಮಸ್ಕಿ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಹಿಂದುಳಿದ ಮತ್ತು ಕಾಯಕ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ‘ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಹೇಳಿದರು.

ಮಸ್ಕಿ ಕ್ಷೇತ್ರದ ಉಪಚುನಾವಣೆ ನಿಮಿತ್ತ ವಿವಿಧ ಹಿಂದುಳಿದ ವರ್ಗಗಳ ಸಮುದಾಯಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳ ಸಮಸ್ಯೆ ಆಳ ಅರಿಯಲೆಂದೇ ಇಡೀ ಕ್ಷೇತ್ರ ಸಂಚರಿಸುತ್ತಿದ್ದೇನೆ. ಪ್ರತಿ ಸಮುದಾಯದ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರತಾಪಗೌಡ ಪಾಟೀಲ ಬದ್ಧರಾಗಿದ್ದಾರೆ. ಚುನಾವಣೆಯಲ್ಲಿ ಹಿಂದುಳಿದ ವರ್ಗದ ಜನರು ಅವರ ಪರವಾಗಿ ನಿಲ್ಲಬೇಕು‘ ಎಂದು ಮನವಿ ಮಾಡಿದರು.

ADVERTISEMENT

ಮಡಿವಾಳ, ಗೊಲ್ಲ, ಸವಿತಾ, ಗಂಗಾಮತಸ್ತ, ಉಪ್ಪಾರ, ವಿಶ್ವಕರ್ಮ, ಈಡಿಗ, ಭೋವಿ, ಬಂಜಾರ ಸೇರಿದಂತೆ ವಿವಿಧ ಸಮುದಾಯಗಳ ಜನರು ಭಾಗವಹಿಸಿದ್ದರು.

ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷ ಎಂ.ಅಪ್ಪಣ್ಣ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ್, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ, ಕೆಎಸ್‌ಆರ್‌ಟಿಸಿ ಉಪಾಧ್ಯಕ್ಷ ಈಶ್ವರಪ್ಪ ಸೇರಿದಂತೆ ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.