ADVERTISEMENT

ಹಣ ಹಂಚಿಕೆ ಪ್ರಕರಣ: ಕ್ರಮಕ್ಕೆ ಕೆಆರ್‌ಎಸ್ ಪಕ್ಷ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 15:31 IST
Last Updated 9 ಏಪ್ರಿಲ್ 2021, 15:31 IST
ಮಸ್ಕಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಹಣ ಹಂಚುತ್ತಿದ್ದು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಶುಕ್ರವಾರ ಮಸ್ಕಿಯಲ್ಲಿ ಚುನಾವಣಾಧಿಕಾರಿ ರಾಜಶೇಖರ ಡಂಬಳ ಅವರಿಗೆ ಮನವಿ ಸಲ್ಲಿಸಿತು
ಮಸ್ಕಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಹಣ ಹಂಚುತ್ತಿದ್ದು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಶುಕ್ರವಾರ ಮಸ್ಕಿಯಲ್ಲಿ ಚುನಾವಣಾಧಿಕಾರಿ ರಾಜಶೇಖರ ಡಂಬಳ ಅವರಿಗೆ ಮನವಿ ಸಲ್ಲಿಸಿತು   

ಮಸ್ಕಿ: ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ಹಾಕುವಂತೆ ಪಕ್ಷದ ಕಾರ್ಯಕರ್ತರು ಮಹಿಳೆಯರಿಗೆ ಹಣ ಹಂಚುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರೂ ಸಹ ಚುನಾವಣಾ ಆಯೋಗ ಕಣ್ಣು ಮಚ್ಚಿಕುಳಿತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಶುಕ್ರವಾರ ಚುನಾವಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಬೇರೆ ಬೇರೆ ಜಿಲ್ಲೆಗಳಿಂದ ಬಂದ ಬಿಜೆಪಿ ಕಾರ್ಯಕರ್ತರು ಮಹಿಳಾ ಮತದಾರರಿಗೆ ಹಣ ಹಂಚಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡುವಂತೆ ಮನವಿ ಮಾಡುತ್ತಿರುವ ದೃಶ್ಯ ಕಳೇದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾದ್ಯಮಗಳಲ್ಲಿ ಸುದ್ದಿಯಾಗಿದೆ. ಆದರೆ, ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಇದನ್ನು ನೋಡಿಯೋ ನೋಡದಂತೆ ಕಣ್ಣು ಮುಚ್ಚಿಕುಳಿತಿಕೊಂಡು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರು.

ಕೂಡಲೇ ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು, ಮತದಾರರಿಗೆ ಹಣ ಹಂಚಿದ ವ್ಯಕ್ತಿಗಳನ್ನು ಗುರುತಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಚುನಾವಣಾಧಿಕಾರಿ ರಾಜಶೇಖರ ಡಂಬಳ ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ಪಕ್ಷದ ಮುಖಂಡ ಮಂಜೇಗೌಡ, ಲಿಂಗೇಗೌಡ ಸೇರಿದಂತೆ ಅನೇಕ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.