ಮಸ್ಕಿ: ತಾಲ್ಲೂಕಿನ ಹಡಗಲಿ ಗ್ರಾಮದ ಬಳಿ ರಾಯಚೂರು ಜಿಲ್ಲಾ ಪೊಲೀಸ್ ವಿಶೇಷ ತಂಡ ಮತ್ತು ಮಸ್ಕಿ ಪೊಲೀಸ್ ತಂಡ ಜಂಟಿಯಾಗಿ ಜೂಜು ಅಡ್ಡೆ ಮೇಲೆ ಶನಿವಾರ ದಾಳಿ ಮಾಡಿವೆ.
ದಾಳಿ ವೇಳೆ 52 ದ್ವಿಚಕ್ರ ವಾಹನ ಹಾಗೂ ₹2.02 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಬಹು ದಿನಗಳಿಂದ ಭಾರಿ ಪ್ರಮಾಣದಲ್ಲಿ ಇಸ್ಪೀಟ್ ಆಟ ನಡೆಯುತ್ತಿತ್ತು ಎನ್ನಲಾಗುತ್ತಿದೆ. 16 ಜನರ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.