ಮಸ್ಕಿ (ರಾಯಚೂರು ಜಿಲ್ಲೆ): ಪಟ್ಟಣದ ಭ್ರಮರಾಂಬ ದೇವಿಯ ಪುರಾಣ ಮಂಗಲೋತ್ಸವದ ಅಂಗವಾಗಿ ಮಂಗಳವಾರ ಮಹಿಳೆಯರು ದೇವಿಯ ರಥ ಎಳೆದರು.
ಸಂಜೆ 5 ಗಂಟೆಗೆ ಭ್ರಮರಾಂಬ ದೇವಿಯ ಉತ್ಸವ ಮೂರ್ತಿಯನ್ನು ರಥದ ಸುತ್ತ 5 ಬಾರಿ ಪ್ರದಕ್ಷಿಣೆ ಹಾಕಿಸಿದ ನಂತರ ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ ರಥಕ್ಕೆ ಪೂಜೆ ಸಲ್ಲಿಸಿದರು.
ಜಯಘೋಷಗಳ ನಡುವೆ ದೇವಿ ಮೂರ್ತಿಯನ್ನು ರಥದ ಮೇಲೆ ಪ್ರತಿಷ್ಠಾಪಿಸಲಾಯಿತು. ಭಕ್ತರು ಬಾಳೆ ಹಣ್ಣು ಹಾಗೂ ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು.
ರಥಕ್ಕೆ ಚಾಲನೆ ನೀಡುತ್ತಿದ್ದಂತೆ ನೂರಾರು ಮಹಿಳೆಯರು ರಥದ ಮಿಣಿ (ಹಗ್ಗ) ಹಿಡಿದು ಎಳೆಯ ತೊಡಗಿದರು. ಹೆದ್ದಾರಿ ಪಕ್ಕದ ಪಾದಗಟ್ಟೆಯವರೆಗೆ ರಥ ಎಳೆದು ವಾಪಸ್ ದೇವಸ್ಥಾನಕ್ಕೆ ತರಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.