ADVERTISEMENT

ಮಸ್ಕಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಸನಗೌಡ, ಪ್ರತಾಪಗೌಡ 

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2021, 10:32 IST
Last Updated 24 ಮಾರ್ಚ್ 2021, 10:32 IST
ಮಸ್ಕಿ ಉಪಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ನಾಮಪತ್ರ ಸಲ್ಲಿಸಿದರು.
ಮಸ್ಕಿ ಉಪಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ನಾಮಪತ್ರ ಸಲ್ಲಿಸಿದರು.   

ರಾಯಚೂರು: ಮಸ್ಕಿ ಉಪಚುನಾವಣೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಪ್ರತ್ಯೇಕವಾಗಿ ತಮ್ಮ ವಕೀಲರೊಂದಿಗೆ ಬಂದು ಬುಧವಾರ ನಾಮಪತ್ರ ಸಲ್ಲಿಸಿದರು.

ಮಸ್ಕಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ರಾಜಶೇಖರ ಡಂಬಳ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಮಾರ್ಚ್ 29ರಂದು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಅಂದು ಆಯಾ ಪಕ್ಷಗಳ ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ.

ADVERTISEMENT
ಮಸ್ಕಿ ಉಪಚುನಾವಣೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಬುಧವಾರ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.