ADVERTISEMENT

ಮಸ್ಕಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಇಂದು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 6:02 IST
Last Updated 29 ಮಾರ್ಚ್ 2021, 6:02 IST
   

ಮಸ್ಕಿ (ರಾಯಚೂರು): ಮಸ್ಕಿ ಉಪಚುನಾವಣೆ ಕಣದಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಸೋಮವಾರ ಒಂದೇ ದಿನ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಈ ಮೊದಲು ಇಬ್ಬರೂನಾಮಪತ್ರ ಸಲ್ಲಿಸಿದ್ದು ಈಗ ಅಧಿಕೃತವಾಗಿ ಬಿ ಫಾರಂ ನೊಂದಿಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಎರಡೂ ಪಕ್ಷಗಳಿಂದ ಸಭೆಗಳನ್ನು ಆಯೋಜಿಸಲಾಗಿದೆ. ಪಕ್ಷದ ಕಚೇರಿ ಪಕ್ಕದಲ್ಲಿಯೇ ಬಿಜೆಪಿ ಸಭೆ ನಡೆಯಲಿದ್ದು, ಸಚಿವ ಶ್ರೀರಾಮುಲು, ಎನ್.ರವಿಕುಮಾರ್, ಬಿ.ವೈ.ವಿಜಯೇಂದ್ರ, ಶಾಸಕರಾದ ರಾಜುಗೌಡ, ಡಾ.ಶಿವರಾಜ ಪಾಟೀಲಪಾಲ್ಗೊಳ್ಳುವರು.

ADVERTISEMENT

ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ.ಶಿವಕುಮಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ ಸೇರಿದಂತೆ ನೆರೆಯ ಜಿಲ್ಲೆಗಳ ಪಕ್ಷದ ನಾಯಕರು ಕಾಂಗ್ರೆಸ್ ಅಭ್ಯರ್ಥಿಬಸನಗೌಡ ತುರ್ವಿಹಾಳ ಅವರಿಗೆ ನಾಮಪತ್ರ ಸಲ್ಲಿಸುವಾಗ ಜೊತೆಯಾಗುವರು.

ಕನಕದಾಸ ವೃತ್ತದಿಂದ ಕಾಂಗ್ರೆಸ್ ರ‍್ಯಾಲಿ ನಡೆಯಲಿದೆ. ನಂತರ ಬಹಿರಂಗ ಸಭೆ ಆಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.