ADVERTISEMENT

ಮಸ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 10:57 IST
Last Updated 13 ಜನವರಿ 2022, 10:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮಸ್ಕಿ: ತಾಲ್ಲೂಕಿನ ಬಳಗಾನೂರು ಪಟ್ಟಣದ ಬಸವೇಶ್ವರ ಸಂಯುಕ್ತ ಪ್ರೌಢಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗುರುವಾರ ಕೋವಿಡ್‌ ದೃಢಪಟ್ಟಿದೆ.

ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಲೆಗೆ ಭೇಟಿ ನೀಡಿದ ತಹಶೀಲ್ದಾರ್ ಕವಿತಾ ಆರ್. ಅವರು, ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರೊಂದಿಗೆ ಸಭೆ ನಡೆಸಿದರು.

7ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢಪಟ್ಟ ಕಾರಣ, ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ರಾಪೀಡ್ ಟೆಸ್ಟ್ ಮಾಡಲಾಗಿದ್ದು, ಹೆಚ್ಚಿನ ತಪಾಸಣೆಗಾಗಿ ಗಂಟಲು ದ್ರವವನ್ನು ರಾಯಚೂರಿಗೆ ಕಳಿಸಲಾಗಿದೆ.

ADVERTISEMENT

ಕೋವಿಡ್‌ ದೃಢಪಟ್ಟ ವಿದ್ಯಾರ್ಥಿಗಳ ಪ್ರಥಮ ಹಾಗೂ ದ್ವೀತಿಯ ಸಂಪರ್ಕಿತರನ್ನು ಪತ್ತೆ ಮಾಡಿದ್ದು ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗುವುದು ಎಂದು ತಹಶೀಲ್ದಾರ್ ಕವಿತಾ ಆರ್. ತಿಳಿಸಿದರು.

ಸಂಬಂಧಿಸಿದ ವಿದ್ಯಾರ್ಥಿಗಳನ್ನು ಹೊಮ್ ಕ್ವಾರಂಟೈನ್ ಮಾಡಲಾಗಿದೆ. ತರಗತಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದ್ದು ತರಗತಿಯ ಕೊಠಡಿಗೆ ಸಾನಿಟೈಸರ್ ಮಾಡಲಾಗಿದೆ ಎಂದು ಹೇಳಿದರು.

ಒಟ್ಟು ನಾಲ್ವರಿಗೆ ಕೋವಿಡ್ : ತಾಲ್ಲೂಕಿನ ಪಾಪನಕೆಲ್ಲೂರು ವ್ಯಾಪ್ತಿಯಲ್ಲಿ 1, ಮಸ್ಕಿ ವ್ಯಾಪ್ತಿಯಲ್ಲಿ 1 ಹಾಗೂ ಬಳಗಾನೂರು ಪಟ್ಟಣದಲ್ಲಿ 2 ಸೇರಿ ಒಟ್ಟು ತಾಲ್ಲೂಕಿನಲ್ಲಿ ನಾಲ್ಕು ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ತಹಶೀಲ್ದಾರ್ ಕವಿತಾ ಆರ್. ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.