ADVERTISEMENT

‘ಹಿಂದುಳಿದ ವರ್ಗಗಳ ಮತಗಳು ಬಿಜೆಪಿ ಪರ’

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 11:53 IST
Last Updated 11 ಏಪ್ರಿಲ್ 2021, 11:53 IST

ಮಸ್ಕಿ: ‘ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಶ್ರಮಿಸುತ್ತಿದ್ದರಿಂದ ಮಸ್ಕಿ ಉಪ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮತಗಳು ಬಿಜೆಪಿ ಪರ ಬರಲಿವೆ‘ ಎಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ನ.ಲ. ನರೇಂದ್ರ ಬಾಬು ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ‘ಕ್ಷೇತ್ರದಲ್ಲಿ ಶೇ 50 ಪ್ರತಿಶತ ಹಿಂದುಳಿದ ವರ್ಗಗಳ ಮತಗಳು ಇವೆ. ಬಿಜೆಪಿ ಸರ್ಕಾರದ ಅವದಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿರುವ ಕಾರಣ ಹಿಂದುಳಿದ ವರ್ಗಗಳ ಮತದಾರರು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಎಲ್ಲಾ ಜನಾಂಗದ ಪ್ರಶ್ನಾತೀತ ನಾಯಕರಾಗಿದ್ದಾರೆ. ಎಲ್ಲಾ ಸಮುದಾಯದ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ ಎಂದರು.

ADVERTISEMENT

ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸಂಗಮೇಶ, ಮಸ್ಕಿ ಉಸ್ತುವಾರಿ ಸಿದ್ದೇಶ ಯಾದವ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.