ಮಸ್ಕಿ: ಮಸ್ಕಿ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 9 ಹಾಗೂ ಕೋವಿಡ್ ನಿಯಮ ಉಲ್ಲಂಘಿಸಿದ ಬಗ್ಗೆ 14 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಚುನಾವಣಾಧಿಕಾರಿ ರಾಜಶೇಖರ ಡಂಬಳ ಹೇಳಿದ್ದಾರೆ.
‘ಪಟ್ಟಣದ ಚುನಾವಣಾಧಿಕಾರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 14 ಪ್ರಕರಣಗಳಲ್ಲಿ ₹ 17,600 ದಂಡ ವಸೂಲಿ ಮಾಡಲಾಗಿದೆ. ಮತದಾರರಿಗೆ ಹರ್ವಾಪುರ ಗ್ರಾಮದಲ್ಲಿ ಹಣ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಅನಾಮಧೇಯ ಕಾರ್ಯಕರ್ತನ ವಿರುದ್ಧ ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‘ ಎಂದು ರಾಜಶೇಖರ ಡಂಬಳ ತಿಳಿಸಿದ್ದಾರೆ.
ಚುನಾವಣಾ ಅಕ್ರಮ ತಡೆಯಲು 110 ಜನರನ್ನೊಳಗೊಂಡ ಸಿಆರ್‌ಪಿಎಫ್ ತಂಡ ನಿಯೋಜನೆ ಮಾಡಲಾಗುವುದು. ಚುನಾವಣಾ ಅಕ್ರಮ ಚಟುವಟಿಕೆಗಳು ಕಂಡು ಬಂದರೆ ಸಿವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಲು ಅವಕಾಶವಿದ್ದು, ಅಂತಹ ಚಟುವಟಿಕೆಗಳು ಕಂಡು ಬಂದರೆ ದೂರು ಸಲ್ಲಿಸುಬಹುದು ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.