ADVERTISEMENT

ಉಪ ಚುನಾವಣೆ ಗಿಮಿಕ್: ಧ್ರುವನಾರಾಯಣ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 12:09 IST
Last Updated 10 ಏಪ್ರಿಲ್ 2021, 12:09 IST
ಧ್ರುವನಾರಾಯಣ
ಧ್ರುವನಾರಾಯಣ   

ಮಸ್ಕಿ: ’ಉಪ ಚುನಾವಣೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯವರ ಮನೆಗೆ ಹೋಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಪಾಹಾರ ಮಾಡಿದ್ದು ರಾಜಕೀಯ ಗಿಮಿಕ್ ಅಲ್ಲದೆ ಮತ್ತೇನು ಅಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಟೀಕಿಸಿದರು.

‘ಪರಿಶಿಷ್ಟ ಜಾತಿಯವರ ಮನೆಗೆ ಸಿಎಂ ಭೇಟಿ ನೀಡಿದ್ದಕ್ಕೆ ನಮ್ಮ ವಿರೋಧ ಇಲ್ಲ. ಈ ಹಿಂದೆ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿಯವರಿಗೆ ಹೆಚ್ಚಿನ ಅನುದಾನ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ನೀಡಿದ್ದ ಅನುದಾನ ಕಡಿತಗೊಳಿಸಿ ವಂಚನೆ ಮಾಡಿದೆ‘ ಎಂದು ಆರೋಪಿಸಿದರು.

ಇದೀಗ ಮಸ್ಕಿ ಉಪ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಯವರ ಮತ ಪಡೆಯಲು ಅವರ ಮನೆಗೆ ತೆರಳಿ ಉಪಾಹಾರ ಸೇವಿಸುವ ಮೂಲಕ ಅವರ ಮತ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ದೂರಿದರು.

ADVERTISEMENT

ಇಂದು ಬಹಿರಂಗ ಸಭೆ: ಭಾನುವಾರ ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ಪರವಾಗಿ ಕಾರ್ಯಕರ್ತರ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.

ಕೆಪಿಸಿಸಿ ಉಸ್ತುವಾರಿ ಸುರ್ಜಿತವಾಲ್, ರಾಜ್ಯ ಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.