ADVERTISEMENT

ಮಸ್ಕಿ: ‘ಶೋಷಿತ ಸಮಾಜಕ್ಕೆ ನ್ಯಾಯ ಸಲ್ಲಿಕೆ’-ಬಿ.ಎಸ್.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 13:51 IST
Last Updated 9 ಏಪ್ರಿಲ್ 2021, 13:51 IST
ಮುದಗಲ್ ಪಟ್ಟಣದಲ್ಲಿ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಮನೆಯಲ್ಲಿ ನಡೆದ ಸವಿತಾ ಸಮಾಜದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು
ಮುದಗಲ್ ಪಟ್ಟಣದಲ್ಲಿ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಮನೆಯಲ್ಲಿ ನಡೆದ ಸವಿತಾ ಸಮಾಜದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು   

ಮುದಗಲ್: ‘ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರು 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪಟ್ಟಣದ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಮನೆಯಲ್ಲಿ ನಡೆದ ಸವಿತಾ ಸಮಾಜದ ಸಭೆಯಲ್ಲಿ ಮಾತನಾಡಿದರು.

‘ಪ್ರತಾಪಗೌಡ ಅವರು ಗೆದ್ದು ನಮ್ಮ ಸರ್ಕಾರದ ಸದಸ್ಯರಾಗುತ್ತಾರೆ. ನಮ್ಮ ಸರ್ಕಾರದಲ್ಲಿ ಎಲ್ಲಾ ಶೋಷಿತ ಸಮಾಜಕ್ಕೆ ನ್ಯಾಯ ದೊರಕಿದೆ. ನಾನು ಹೆಣ್ಣುಮಕ್ಕಳಿಗೆ ಭಾಗ್ಯ ಲಕ್ಷ್ಮೀ ಬಾಂಡ್ ನೀಡಿದ್ದೇನೆ. ಲಾಕ್‌ಡೌನ್ ವೇಳೆಯಲ್ಲಿ ಸವಿತಾ ಸಮಾಜಕ್ಕೆ ಐದು ಸಾವಿರ ಸಹಾಯ ಧನ ನೀಡಿದ್ದೇನೆ. ತಾವು ಪ್ರತಾಪಗೌಡ ಅವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿ ಮಾಡಿಕೊಳ್ಳಬೇಕು‘ ಎಂದರು.

ADVERTISEMENT

ಶಾಸಕರಾದ ದೊಡ್ಡನಗೌಡ ಪಾಟೀಲ್, ರಾಜುಗೌಡ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಚಿನ್ನದ ಗಣಿ ನಿಗಮ ಅಧ್ಯಕ್ಷ ಮಾನಪ್ಪ ವಜ್ಜಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.