ADVERTISEMENT

‘ಬಿಜೆಪಿ ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ’–ಬೋಸರಾಜ

ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪರ ಬೋಸರಾಜ ಪ್ರಚಾರ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2021, 10:36 IST
Last Updated 4 ಏಪ್ರಿಲ್ 2021, 10:36 IST
ಮಸ್ಕಿ ಕ್ಷೇತ್ರದ ಗುಡಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಪಿಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜು ಮತಯಾಚನೆ ಮಾಡಿದರು
ಮಸ್ಕಿ ಕ್ಷೇತ್ರದ ಗುಡಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಪಿಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜು ಮತಯಾಚನೆ ಮಾಡಿದರು   

ಮಸ್ಕಿ: ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿ ಬಿಜೆಪಿ ಪಕ್ಷಾಂತರ ಮಾಡಿದ ಪ್ರತಾಪಗೌಡ ಪಾಟೀಲರನ್ನು ಉಪ ಚುನಾವಣೆಯಲ್ಲಿ ಸೋಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ ಕರೆ ನೀಡಿದರು.

ತಾಲ್ಲೂಕಿನ ಗುಡಿಹಾಳ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾದ್ಯ, ಬಿಜೆಪಿ ಜಾತಿ ಹಾಗೂ ಕೊಮು ರಾಜಕೀಯ ಮಾಡುವ ಮೂಲಕ ಜನರಲ್ಲಿ ಕಂದಕ ನಿರ್ಮಿಸುತ್ತಿದೆ‘ ಎಂದರು.

ಮುಖಂಡರಾದ ಹಂಪಯ್ಯ ಸಾಹುಕಾರ, ಕೆ. ಕರಿಯಪ್ಪ, ಅಭ್ಯರ್ಥಿ ಆರ್. ಬಸನಗೌಡ. ಕಾಂಗ್ರೆಸ್ ನಗರ ಬ್ಲಾಕ್ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಸೇರಿದಂತೆ ಇತರರು ಇದ್ದರು.

ADVERTISEMENT

5 ರಂದು ಸಿದ್ದು, ಡಿಕೆಶಿ ಪ್ರಚಾರ: ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ 5 ರಿಂದ ಎರಡು ದಿನಗಳ ಕಾಲ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.