ಮಸ್ಕಿ: ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರ ಪುತ್ರಿ ಪ್ರೀತಿ ಪಾಟೀಲ ಹಾಗೂ ಸೊಸೆಯರಾದ ರಾಜೇಶ್ವರಿ ವಿ. ಪಾಟೀಲ, ವರ್ಷಾ ಪಿ. ಪಾಟೀಲ ಶುಕ್ರವಾರ ಪಟ್ಟಣದ ವಿವಿಧ ವಾರ್ಡಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಪ್ರತಾಪಗೌಡ ಪಾಟೀಲ ಅವರಿಗೆ ಕೊವಿಡ್ ದೃಢಪಟ್ಟ ಕಾರಣ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರಿಂದ ಪ್ರತಾಪಗೌಡರ ಮೂವರು ಮಕ್ಕಳು, ಸೊಸೆಯರು, ಕುಟುಂಬದ ಸದಸ್ಯರು ಶುಕ್ರವಾರ ಪಟ್ಟಣದಲ್ಲಿ ಮನೆ ಮನೆಗೆ ತೆರಳಿ ಪ್ರತಾಪಗೌಡ ಪಾಟೀಲ ಅವರಿಗೆ ಮತ ನೀಡಿ ಆರ್ಶೀವದಿಸಬೇಕು ಎಂದು ಮನವಿ ಮಾಡಿದರು.
‘ಉಪ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನಮ್ಮ ಮಾವನವರಿಗೆ ಆರ್ಶೀವಾದ ಮಾಡಿ ಆಯ್ಕೆ ಮಾಡಲಿದ್ದಾರೆ ಎಂಬ ನೂರಕ್ಕೆ ನೂರರಷ್ಟು ವಿಶ್ವಾಸ ಇದೆ‘ ಎಂದು ಪ್ರತಾಪಗೌಡ ಪಾಟೀಲ ಅವರ ಸೊಸೆ ವರ್ಷಾ ಪಾಟೀಲ ತಿಳಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.