ADVERTISEMENT

ಬಿಜೆಪಿ ವಿರುದ್ಧ ಮತ ಚಲಾಯಿಸಲು ಕರೆ

ನ್ಯಾ, ಸದಾಶಿವ ಆಯೋಗದ ವರದಿ ಜಾರಿ ವಿಳಂಬ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 15:26 IST
Last Updated 9 ಏಪ್ರಿಲ್ 2021, 15:26 IST

ಮಸ್ಕಿ: ಎರಡು ಬಾರಿ ಅಧಿಕಾರ ಸಿಕ್ಕರೂ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಮುಂದಾಗದ ಬಿಜೆಪಿ ವಿರುದ್ಧ ಚುನಾವಣೆಯಲ್ಲಿ ಮತಚಲಾಯಿಸಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವರಾಜ ಅಕ್ಕರಕಿ ಕರೆ ನೀಡಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಸದಾಶಿವ ಆಯೋಗದ ವರದಿ ಜಾರಿಗೆ ಎರಡು ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಕಳೆದ ಬಾರಿ ಅಧಿಕಾರದಲ್ಲಿದ್ದ ಬಿಜೆಪಿ ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ತರುವುದಾಗಿ ಹೇಳಿತ್ತು. ಆದರೆ, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೂ ವರದಿ ಜಾರಿಗೆ ಮುಂದಾಗದೇ ಸಮುದಾಯದ ಜನರನ್ನು ಮತ ಬ್ಯಾಂಕ್‌ಗಳನ್ನಾಗಿ ಮಾಡಿಕೊಳ್ಳಲು ಹೋರಟಿದೆ’ ಎಂದು ಆರೋಪಿಸಿದರು.

ಉಪ ಚುನಾವಣೆಯಲ್ಲಿ ಸಮುದಾಯದ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ಮುಖಂಡ ಸಿ. ದಾನಪ್ಪ ನಿಲೋಗಲ್, ದೊಡ್ಡಪ್ಪ ಮುರಾರಿ ಸೇರಿದಂತೆ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.