ಮಸ್ಕಿ: ‘ಸರ್ಕಾರ ವಿವಿಧ ಇಲಾಖೆಗಳ ಮೂಲಕ ಬಡವರಿಗಾಗಿ ತಂದ ಯೋಜನೆಗಳನ್ನು ಅಧಿಕಾರಿಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಯೋಜನೆಯ ಉದ್ದೇಶ ಸಾರ್ಥಕವಾಗುತ್ತದೆ’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ‘ಆದಿ ಕರ್ಮಯೋಗಿ’ ಅಭಿಯಾನದ ಅಡಿಯಲ್ಲಿ ಏರ್ಪಡಿಸಿದ್ದ ಎರಡು ದಿನಗಳ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
‘ಈ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 243 ಗ್ರಾಮಗಳು ಆಯ್ಕೆಯಾಗಿವೆ. ಅದರಲ್ಲಿ ಮಸ್ಕಿ ಕ್ಷೇತ್ರಕ್ಕೆ 100 ಗ್ರಾಮಗಳು ಸೇರಿವೆ’ ಎಂದರು.
‘ಹಿಂದುಳಿದ ಗ್ರಾಮಗಳು ಅಭಿವೃದ್ಧಿಯಾಗಬೇಕು. ಆದ್ದರಿಂದ ಪ್ರತಿಯೊಂದು ಹಳ್ಳಿಗಳಲ್ಲಿ ಸಮಸ್ಯೆಗಳನ್ನು ನೋಡಿ ಉತ್ತಮ ವ್ಯವಸ್ಥೆ ಆದಾಗ ಮಾತ್ರ ಹಳ್ಳಿಗಳು ಸುಧಾರಣೆಯಾಗಲು ಸಾಧ್ಯ’ ಎಂದು ಹೇಳಿದರು.
‘ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿದಾಗ ಮಾತ್ರ ಯೋಜನೆಗಳು ಸಮರ್ಪಕವಾಗಿ ಮುಟ್ಟಲು ಸಾಧ್ಯವಾಗುತ್ತದೆ. ಪ್ರತಿಯೊಂದರ ಸರ್ವೆ ಕಾರ್ಯ ನಡೆಸಬೇಕು’ ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಟಿ.ರೋಣಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ ಸೇರಿ ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಎರಡು ದಿನಗಳ ನಡೆದ ತರಬೇತಿಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ 200ಕ್ಕೂ ಹೆಚ್ಚು ಫಲಾನುಭವಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.