ADVERTISEMENT

ಮಸ್ಕಿ: ₹1.80 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ–ಬಸನಗೌಡ ತುರ್ವಿಹಾಳ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 8:04 IST
Last Updated 25 ಫೆಬ್ರುವರಿ 2026, 8:04 IST
ಮಸ್ಕಿಯಲ್ಲಿ ನಡೆಯುತ್ತಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ಮಂಗಳವಾರ ಪರಿಶೀಲಿಸಿದರು
ಮಸ್ಕಿಯಲ್ಲಿ ನಡೆಯುತ್ತಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ಮಂಗಳವಾರ ಪರಿಶೀಲಿಸಿದರು   

ಮಸ್ಕಿ: ಪಟ್ಟಣದ ಕ್ರೀಡಾಪ್ರೇಮಿಗಳ ಬಹುದಿನದ ಕನಸಾಗಿದ್ದ ಸುಸಜ್ಜಿತ ಒಳಾಂಗಣ ಕ್ರೀಡಾಂಗಣವನ್ನು ₹1.80 ಕೋಟಿ ವೆಚ್ಚದಲ್ಲಿ ನಿರ್ನಿಸಲಾಗುತ್ತಿದೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಸಿಂಧನೂರು ರಸ್ತೆಯ ಎಲಿಗಾರ ಬಡಾವಣೆಯ ಪುರಸಭೆಯ ಸಿಎ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಕ್ರೀಡಾಂಗಣ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿ ಅವರು ಮಾತನಾಡಿದರು.

130x80 ಅಳತೆಯಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ. ಟೆನ್ನಿಸ್, ಬ್ಯಾಟ್ ಮೆಂಟನ್, ಜಿಮ್ ಗಳನ್ನು ಈ ಕ್ರೀಡಾಂಗಣ ಒಳಗೊಂಡಿದೆ. ಕ್ರೀಡಾಂಗಣ ನಿರ್ಮಿಸುವ ಹೊಣೆ ಶಕ್ತಿ ನಗರದ ಕ್ಯಾಷುಟೆಕ್ ಸಂಸ್ಥೆಗೆ ವಹಿಸಲಾಗಿದ್ದು ಕೆಲಸ ಪ್ರಗತಿಯಲ್ಲಿದ್ದು ಆರು ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಮುಖಂಡ ನಿರುಪಾದೆಪ್ಪ ವಕೀಲ ಇತರರು ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.