
ಮಸ್ಕಿ: ತಾಲ್ಲೂಕಿನ ಹಾಲಾಪೂರ ಗ್ರಾಮದಲ್ಲಿ ₹84 ಲಕ್ಷ ವೆಚ್ಚದಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಹಾಗೂ ಕರ್ನಾಟಕ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಶುಕ್ರವಾರ ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು,‘ಗ್ರಾಮದಲ್ಲಿ ರಸ್ತೆಯನ್ನು 5.5 ಮೀಟರ್‌ನಿಂದ 11 ಮೀಟರ್‌ಗೆ ವಿಸ್ತರಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಆಗಲಿದೆ. ವಾಹನ ಸಂಚಾರವೂ ಸುಗಮವಾಗಲಿದೆ’ ಎಂದು ತಿಳಿಸಿದರು.
‘ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದ್ದು, ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು’ ಎಂದು ನಿರ್ದೇಶಿಸಿದರು.
ವೆಂಕಟರಡ್ಡಿ ಹಾಲಾಪೂರ, ಹನುಮೇಶ ಬಾಗೋಡಿ, ಬಸ್ಸಪ್ಪ ಜಂಗಮರಳ್ಳಿ, ಬಲವಂತರಾಯ ವಟಗಲ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.