ಮಸ್ಕಿ: ಪ್ರಮುಖ ಕಿರಾಣಿ ವರ್ತಕ, ಪುರಸಭೆ ಸದಸ್ಯ ಮಲ್ಲಿಕಾರ್ಜುನ ಬ್ಯಾಳಿ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ನ.26ರಂದು ರಾತ್ರಿ 8ಕ್ಕೆ ಮನೆಯಲ್ಲಿ ತನ್ನ ಎರಡು ಮೊಬೈಲ್‌ಗಳನ್ನು ಇಟ್ಟು ಯಾರನ್ನೋ ಭೇಟಿಯಾಗಿ ಬರುತ್ತೇನೆಂದು ಹೇಳಿ ಹೋದ ನಂತರ ಮನೆಗೆ ಬಂದಿಲ್ಲ’ ಎಂದು ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
‘ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ’ ಎಂದು ಪಿಎಸ್ಐ ಮುದ್ದು ರಂಗಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.