ADVERTISEMENT

ಮಸ್ಕಿ | ಮಾರುತೇಶ್ವರ ಮಹಾರಥೋತ್ಸವ

​ಪ್ರಜಾವಾಣಿ ವಾರ್ತೆ
Published 13 ಮೇ 2025, 14:47 IST
Last Updated 13 ಮೇ 2025, 14:47 IST
ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣದಲ್ಲಿ ಮಾರುತಿದೇವರ  ಮಹಾ ರಥೋತ್ಸವ ಅದ್ದೂರಿಯಾಗಿ ನೆರವೇರಿತು
ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣದಲ್ಲಿ ಮಾರುತಿದೇವರ  ಮಹಾ ರಥೋತ್ಸವ ಅದ್ದೂರಿಯಾಗಿ ನೆರವೇರಿತು   

ಮಸ್ಕಿ: ತಾಲ್ಲೂಕಿನ ಬಳಗಾನೂರು ಪಟ್ಟಣದಲ್ಲಿ ಮಾರುತಿದೇವರ ಮಹಾ ರಥೋತ್ಸವವು ನೂರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಅದ್ದೂರಿಯಾಗಿ ನೆರವೇರಿತು.

ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ದೇವಸ್ಥಾನ ಸಮಿತಿ ಅಧ್ಯಕ್ಷರೂ ಆದ ತಹಶೀಲ್ದಾರ್ ಮಲ್ಲಪ್ಪ ಯರಗೋಳ, ಮಲ್ಲಿಕಾರ್ಜುನ ಮಹಾಸ್ವಾಮೀಜಿ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ಭಕ್ತರ ಜಯಘೋಷಗಳ ನಡುವೆ ರಥ ಎಳೆಯಲಾಯಿತು. ಭಕ್ತರು ಉತ್ತುತ್ತಿ, ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.

ADVERTISEMENT

ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಅನೇಕ ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ಪಿಎಸ್‌ಐ ಎರಿಯಪ್ಪ ಅಂಗಡಿ ನೇತೃತ್ವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೀಗಿ ಪೊಲೀಸ ಭದ್ರತೆ ಮಾಡಲಾಗಿತ್ತು,

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.