ಮಸ್ಕಿ: ಪಟ್ಟಣದ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನ ಸೇರಿ ವಿವಿಧ ದೇವಸ್ಥಾನಗಳಲ್ಲಿ ಘಟಸ್ಥಾಪನೆ ಮಾಡುವ ಮೂಲಕ ಶರನ್ನವರಾತ್ರಿ ಉತ್ಸವಕ್ಕೆ ಸೋಮವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಭ್ರಮರಾಂಬ ದೇವಸ್ಥಾನದಲ್ಲಿ ಬೆಳಿಗ್ಗೆ ದೇವಿಯ ಶಿಲಾ ಮೂರ್ತಿಗೆ ಅಭಿಷೇಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು. ಘಟಸ್ಥಾಪನೆಯ ನಂತರ ಚಿನ್ನದ ಕಿರೀಟ ಹಾಗೂ ಹೂವಿನಿಂದ ದೇವಿ ಮೂರ್ತಿ ಅಲಂಕರಿಸಲಾಯಿತು.
ಮಾಜಿ ಶಾಸಕರೂ ಆಗಿರುವ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಪ್ರತಾಪಗೌಡ ಪಾಟೀಲ ಸೇರಿ ಅನೇಕ ಮುಖಂಡರು ಪಾಲ್ಗೊಂಡಿದ್ದರು.
ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ವಿವಿಧ ಪೂಜೆಗಳನ್ನು ನೆರವೇರಿಸುವ ಮೂಲಕ ದಸರಾ ಉತ್ಸವಕ್ಕೆ ಚಾಲನೆ ನೀಡಲಾಯಿತು. ಅನೇಕ ಮುಖಂಡರು ಭಾಗವಹಿಸಿದ್ದರು.
ಕಲ್ಗುಡಿಯ ಚೌಡೇಶ್ವರಿ ದೇವಸ್ಥಾನದಲ್ಲಿಯೂ ವಿವಿಧ ಪೂಜೆಗಳೊಂದಿಗೆ ದೇವಿ ಪುರಾಣಕ್ಕೆ ಚಾಲನೆ ನೀಡಲಾಯಿತು. ದೇವಾಂಗ ಸಮಾಜ, ನೇಕಾರರ ಒಕ್ಕೂಟದ ಪದಾಧಿಕಾರಿಗಳು ಇದ್ದರು. ಚೌಡೇಶ್ವರಿ ದೇವಿ ಮೂರ್ತಿಗೆ ಹೂವಿನಿಂದ ಅಲಂಕಾರ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.