ADVERTISEMENT

ಮಸ್ಕಿ | ಪ್ರಾಮಾಣಿಕ ವ್ಯಕ್ತಿಗಳಿಂದ ಸಮಾಜದ ಸುಧಾರಣೆ:ಬಸವರಾಜ ಪಾಟೀಲ ಸೇಡಂ

​ಪ್ರಜಾವಾಣಿ ವಾರ್ತೆ
Published 5 ಮೇ 2025, 15:45 IST
Last Updated 5 ಮೇ 2025, 15:45 IST
ಮಸ್ಕಿಯಲ್ಲಿ ಪದ್ಮಶ್ರೀ ಪುರಸ್ಕೃತೆ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರನ್ನು ಸನ್ಮಾನಿಸಲಾಯಿತು
ಮಸ್ಕಿಯಲ್ಲಿ ಪದ್ಮಶ್ರೀ ಪುರಸ್ಕೃತೆ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರನ್ನು ಸನ್ಮಾನಿಸಲಾಯಿತು   

ಮಸ್ಕಿ: ‘ಪ್ರಾಮಾಣಿಕ ಹಾಗೂ ಶುದ್ಧ ಮನಸ್ಸಿನ ವ್ಯಕ್ತಿಗಳಿಂದ ಸಮಾಜದ ಸುಧಾರಣೆ ಸಾಧ್ಯ’ ಎಂದು ಸೇಡಂನ ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ಬಸವರಾಜ ಪಾಟೀಲ ಸೇಡಂ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಮೂರು ದಿನಗಳ ಕಾಲ ನಡೆದ ಭ್ರಮರಾಂಬ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತಾಡಿದರು. ‘‍ಪ್ರತಿ ರಂಗದಲ್ಲಿಯೂ ಸಹಕಾರ ಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಹಕಾರಿ ಕ್ಷೇತ್ರ ಪ್ರಬಲವಾಗಿ ಬೆಳೆಯುತ್ತಿದೆ’ ಎಂದರು.

ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಮಾತನಾಡಿ, ‘ಭ್ರಮರಾಂಬ ಸಹಕಾರಿ ಸಂಘ 25 ವರ್ಷ ತುಂಬಿ ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ADVERTISEMENT

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ‘ಸಹಕಾರ ಎಂಬುದು ನಮ್ಮ ಉಸಿರು, ಸಹಕಾರ ಇಲ್ಲದಿದ್ದರೆ ನಮ್ಮ ಬದುಕು ಇಲ್ಲ’ ಎಂದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿ, ‘ಸಹಕಾರಿ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯ ಸೇವಾ ಮನೋಭಾವನೆ ಮುಖ್ಯ ಎಂದರು.

ಕನಕಗಿರಿ-ಮೆದಿಕಿನಾಳ ವಿರಕ್ತಮಠದ ಚನ್ನಮಲ್ಲ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸೌಹಾರ್ದ ಸಹಕಾರಿ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಜಿ. ನಂಜನಗೌಡ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಸಹಕಾರ ಸಂಘದ ಅಧ್ಯಕ್ಷ  ಶಿವಶರಣಪ್ಪ ಇತ್ಲಿ, ಉಪಾಧ್ಯಕ್ಷ ಪಂಪಣ್ಣ ಗುಂಡಳ್ಳಿ, ಸಹಕಾರಿ ವ್ಯವಸ್ಥಾಪಕ ನಿರ್ದೇಶಕ ವೀರೇಶ ಹಿರೇಮಠ ಸೇರಿದಂತೆ ಸಹಕಾರಿ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಸನ್ಮಾನ: ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ಬಸವರಾಜ ಪಾಟೀಲ ಸೇಡಂ, ಪದ್ಮಶ್ರೀ ಪುರಸ್ಕೃತೆ ವೈದ್ಯೆ ಡಾ.ವಿಜಯಲಕ್ಷ್ಮಿ ದೇಶಮಾನೆ. ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು. ಸರಿಗಮಪ ಜೂರಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.‌ ಹಲವಾರು ಗಾಯಕರ ಹಾಡುಗಳು ಪ್ರೇಕ್ಷಕರ ಮನಸೊರೆಗೊಂಡವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.