
ಪ್ರಜಾವಾಣಿ ವಾರ್ತೆ
ಹೈಕೋರ್ಟ್ ಆದೇಶ
ಮಸ್ಕಿ: ಮಸ್ಕಿ ತಾಲ್ಲೂಕಿನ ತಲೇಖಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮ್ಮವ್ವ ಅವರ ಸದಸ್ಯತ್ವವನ್ನು ರದ್ದುಗೊಳಿಸಿ, ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಶಿವಕುಮಾರ ಆದೇಶ ಹೊರಡಿಸಿದ್ದಾರೆ.
2023-24 ಮತ್ತು 2024-25 ನೇ ಸಾಲಿನಲ್ಲಿ ನರೇಗಾ ಯೋಜನೆಗಳಡಿ ಚೆಕ್ ಮೆಜರಮೆಂಟ್ ಇಲ್ಲದೆ ಹಣ ಪಾವತಿಸಿದ್ದು, 15ನೇ ಹಣಕಾಸು ಯೋಜನೆಯ ಕಾಮಗಾರಿಗಳಲ್ಲಿಯೂ ನಿಯಮ ಉಲ್ಲಂಘನೆ ಕಂಡುಬಂದಿದೆ. ಇದರ ಹಿನ್ನೆಲೆಯಲ್ಲಿ, ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಸೆಕ್ಷನ್ 43(ಎ) ಹಾಗೂ 43 (4)ರನ್ವಯ ಉಮ್ಮವ್ವ ಗ್ಯಾನಪ್ಪ ಅವರ ಸದಸ್ಯತ್ವ ರದ್ದು ಮಾಡಿ ಆರು ವರ್ಷಗಳ ಅನರ್ಹತೆ ವಿಧಿಸಿ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.