ADVERTISEMENT

ಮಂತ್ರಾಲಯದಲ್ಲಿ ಸಾಮೂಹಿಕ ಅಷ್ಟೋತ್ತರ ಪಾರಾಯಣ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2023, 4:27 IST
Last Updated 4 ಆಗಸ್ಟ್ 2023, 4:27 IST
ಅಧಿಕ ಶ್ರಾವಣ ಮಾಸದ ಪ್ರಯುಕ್ತ ಮಂತ್ರಾಲಯದಲ್ಲಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನಕ್ಕೆ ಪೂಜೆ ಸಲ್ಲಿಸಿದರು
ಅಧಿಕ ಶ್ರಾವಣ ಮಾಸದ ಪ್ರಯುಕ್ತ ಮಂತ್ರಾಲಯದಲ್ಲಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನಕ್ಕೆ ಪೂಜೆ ಸಲ್ಲಿಸಿದರು   

ರಾಯಚೂರು: ಅಧಿಕ ಶ್ರಾವಣ ಮಾಸದ ನಿಮಿತ್ತ ಮಂತ್ರಾಲಯ ಮಠದಲ್ಲಿ ಸಾಮೂಹಿಕ ಅಷ್ಟೋತ್ತರ ಪಾರಾಯಣ ನಡೆಯಿತು.

ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಮಹಾ ಅಭಿಷೇಕ ನೆರವೇರಿಸಿದರು.

ಮಠದ ಸಹಸ್ರಾರು ಭಕ್ತರು ಮತ್ತು ಶಿಷ್ಯರು ಪಾಲ್ಗೊಂಡು ಸುಬುಧೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೇ ಆರಾಧನಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿದರು.

ADVERTISEMENT
ಅಧಿಕ ಶ್ರಾವಣ ಮಾಸದ ಪ್ರಯುಕ್ತ ಮಂತ್ರಾಲಯದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ಅಷ್ಟೋತ್ತರ ಪಾರಾಯಣ ನಡೆಯಿತು
ಅಧಿಕ ಶ್ರಾವಣ ಮಾಸದ ಪ್ರಯುಕ್ತ ಮಂತ್ರಾಲಯದಲ್ಲಿ ನಡೆದ ಸಾಮೂಹಿಕ ಅಷ್ಟೋತ್ತರ ಪಾರಾಯಣದಲ್ಲಿ ಪಾಲ್ಗೊಂಡಿದ್ದ ಭಕ್ತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.