ಮುದಗಲ್: ಸಮೀಪದ ಮಟ್ಟೂರು ಗ್ರಾಮದಲ್ಲಿ ರಾಮಲಿಂಗೇಶ್ವರ ರಥೋತ್ಸವ ಭಾನುವಾರ ಜರುಗಿತು.
ದೇವಸ್ಥಾನದಲ್ಲಿ ದೇವರಿಗೆ ರುದ್ರಾಭಿಷೇಕ ಹಾಗೂ ಧಾರ್ಮಿಕ ಪೂಜಾ ಕೈಂಕಾರ್ಯಗಳು ನಡೆದವು.
ಇಷ್ಟಾರ್ಥ ಸಿದ್ಧಿಗಾಗಿ ಗ್ರಾಮದ ಭಕ್ತರು ಹರಕೆ ತೀರಿಸಿದರು. ಸಂಜೆ 6 ಗಂಟೆಗೆ ರಥೋತ್ಸವ ಜರುಗಿತು. ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥಕ್ಕೆ ಹೂವು, ಹಣ್ಣು, ಉತ್ತತ್ತಿ, ಬಾಳೆಹಣ್ಣು ಎಸೆದು ಜಯಘೋಷ ಕೂಗಿದರು.
ಮುದಗಲ್, ಮಟ್ಟೂರು, ಗುಡಿಹಾಳ, ಬುದ್ದಿನ್ನಿ, ತೆರಿಭಾವಿ ಹಾಗೂ ಸುತ್ತಲಿನ ಗ್ರಾಮೀಣ ಭಾಗದ ಸಾವಿರಾರು ಭಕ್ತರು ಭಾಗವಹಿಸಿದ್ದರು.
ಸಂತೆಕೆಲ್ಲೂರಿನ ಗುರುಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಬಸನಗೌಡ ತುರ್ವಿಹಾಳ ಹಾಗೂ ಗ್ರಾಮದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.