ADVERTISEMENT

ಎಂಇಎಸ್ ಸಂಘಟನೆ ನಿಷೇಧಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 11:50 IST
Last Updated 11 ಆಗಸ್ಟ್ 2021, 11:50 IST
ಮಾನ್ವಿಯಲ್ಲಿ ಬುಧವಾರ ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ತಹಶೀಲ್ದಾರ್ ಸಂತೋಷರಾಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಮಾನ್ವಿಯಲ್ಲಿ ಬುಧವಾರ ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ತಹಶೀಲ್ದಾರ್ ಸಂತೋಷರಾಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಪ್ರಜಾವಾಣಿ ವಾರ್ತೆ

ಮಾನ್ವಿ: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ನಿಷೇಧಕ್ಕೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್ ಸಂತೋಷರಾಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬೆಳಗಾವಿಯಲ್ಲಿ ಗಡಿವಿಚಾರಕ್ಕೆ ಸಂಬಂಧಿಸಿದಂತೆ ಎಂಇಎಸ್ ಸಂಘಟನೆಯ ಯುವ ಘಟಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಚಳವಳಿ ಅಭಿಯಾನ ಹಮ್ಮಿಕೊಂಡಿರುವು ಖಂಡನೀಯ.

ADVERTISEMENT

ಬೆಳಗಾವಿಯಲ್ಲಿ ಕಾನೂನು ಬಾಹಿರವಾಗಿ ನಿರಂತರವಾಗಿ ಪುಂಡಾಟಿಕೆ ಮೆರೆಯುತ್ತಿರುವ ಎಂಇಎಸ್ ಸಂಘಟನೆಯ ಮುಖಂಡರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಲಾಯಿತು.

ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಇತರ ಪದಾಧಿಕಾರಿಗಳಾದ ಆನಂದಗೌಡ, ರವಿಚಂದ್ರ ನಾಯಕ, ಅಮರೇಶ ಗೂಳಿ, ಚನ್ನಬಸವನಾಯಕ ಜಾನೇಕಲ್, ವೆಂಕಟೇಶ ನಾಯಕ, ಮಲ್ಲಿಕಾರ್ಜುನಗೌಡ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.