ADVERTISEMENT

ರಾಯಚೂರು: ಪರಿಹಾರ ಯೋಜನೆ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 4:00 IST
Last Updated 29 ಜೂನ್ 2022, 4:00 IST
ರಾಯಚೂರಿನ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದ ಜಿಲ್ಲಾ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು
ರಾಯಚೂರಿನ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದ ಜಿಲ್ಲಾ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು   

ರಾಯಚೂರು: ಬಿಸಿಯೂಟ ಯೋಜನೆಯಡಿ ಕೆಲಸ ಮಾಡಿ ನಿವೃತ್ತರಾಗುವವರಿಗೆ ಪರಿಹಾರ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

60 ವರ್ಷ ಸೇವೆ ಸಲ್ಲಿಸಿದ ಬಿಸಿಯೂಟ ನೌಕರರನ್ನು ಏಕಾಏಕಿ ನಿವೃತ್ತಗೊಳಿಸುತ್ತಿರುವ ಖಂಡನೀಯ. ಇಂಥವರಿಗೆ ಇಡಗಂಟು ₹1 ಲಕ್ಷ ಪರಿಹಾರ ಒದಗಿಸಬೇಕು. ಬಿಸಿಯೂಟ ಯೋಜನೆ ಆರಂಭವಾದಾಗಿನಿಂದಲೂ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಕೆಲಸ ಮಾಡಿದವರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಾಗುವುದಕ್ಕೆ ಮತ್ತು ಉತ್ತಮ ಫಲಿತಾಂಶ ಬರಲು ಈ ತಾಯಂದಿರ ಕೊಡುಗೆ ಇದೆ ಎಂದು ಜಿಲ್ಲಾ ಪಂಚಾಯಿತಿ ಕಚೇರಿಗೆ ಮನವಿ ಸಲ್ಲಿಸಿದರು.

ಸಂಘದ ಪದಾಧಿಕಾರಿಗಳಾದ ಡಿ.ಎಸ್‌.ಶರಣಬಸವ, ನಾಗಮ್ಮ, ಅಕ್ಕ ಮಹಾದೇವಿ, ಕಲ್ಯಾಣಮ್ಮ, ಉಮಾ, ರಜೆಯಾ ಬೇಗಂ, ಲಲಿತಾ, ಕರುಣಾಕ್ಷಿ, ಸರಸ್ವತಿ ಮತ್ತಿತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.