ADVERTISEMENT

ರಾಯಚೂರು: ಬಿಸಿಯೂಟ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2021, 15:16 IST
Last Updated 23 ಡಿಸೆಂಬರ್ 2021, 15:16 IST
ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಬಿಸಿಯೂಟ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಗುರುವಾರ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಬಿಸಿಯೂಟ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಗುರುವಾರ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.   

ರಾಯಚೂರು: ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು ಹಾಗೂ ವೇತನವನ್ನು ಪ್ರತಿ ತಿಂಗಳು 2ನೇ ತಾರೀಖಿನ ಒಳಗೆ ಪಾವತಿ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಬಿಸಿಯೂಟ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ಸರ್ಕಾರಿ ಹಿರಿಯ, ಕಿರಿಯ ಹಾಗೂ ಪ್ರೌಢಶಾಲೆಗಳಲ್ಲಿ ಮುಖ್ಯ ಅಡುಗೆ ಮತ್ತು ಸಹಾಯಕರು ಕೆಲಸ ಮಾಡುತ್ತಿದ್ದು, ಮುಖ್ಯ ಅಡುಗೆಯವರಿಗೆ ₹2700 ಹಾಗೂ ಸಹಾಯಕಿಯರಿಗೆ ₹2600 ವೇತನ ನೀಡಲಾಗುತ್ತಿದೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ.

ಅಡುಗೆ ಮಾಡುವ ಜೊತೆಗೆ ಈಗ ಸರ್ಕಾರ ಪ್ರತಿ ಮಕ್ಕಳಿಗೆ ಮೊಟ್ಟೆಗಳನ್ನು ವಿತರಿಸುವುದು ಸೇರಿದಂತೆ ಇತರೆ ಕೆಲಸದ ಒತ್ತಡ ಹೆಚ್ಚಾಗಿದೆ. ವೇತನವನ್ನು ಪ್ರತಿ ತಿಂಗಳು ಸರಿಯಾಗಿ ಪಾವತಿ ಮಾಡಲಾಗುತ್ತಿಲ್ಲ ಎಂದು ಆರೋಪಿಸಿದರು.

ADVERTISEMENT

ಅಡುಗೆ ತಯಾರಿಸುವವರಿಗೆ ಹಾಗೂ ಸಹಾಯಕಿಯರಿಗೆ ₹10 ಸಾವಿರಕ್ಕೆ ವೇತನ ಹೆಚ್ಚಳ ಮಾಡಬೇಕು ಹಾಗೂ ಪ್ರತಿ ತಿಂಗಳು 2ನೇ ದಿನಾಂಕದಂದು ವೇತನ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಸಿಯೂಟ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಮಹಾಲಕ್ಷ್ಮಿ, ಪದಾಧಿಕಾರಿ ನಾಗವೇಣಿ, ಹುಲಿಗೆಮ್ಮ, ಸರೋಜ, ಮಹಾದೇವಿ, ಈರಮ್ಮ, ಮಹೇಶ್ವರಿ, ಹನುಮಂತ ಸೀಕಲ್, ಸಾಬಣ್ಣ, ಈಶ್ವರ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.