ADVERTISEMENT

ರಾಯಚೂರು: ಸಚಿವ ಬೋಸರಾಜು ಅಭಿನಂದನಾ ಗ್ರಂಥ ಬಿಡುಗಡೆ ಜೂನ್ 21ಕ್ಕೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 13:44 IST
Last Updated 19 ಜೂನ್ 2025, 13:44 IST
ಎನ್.ಎಸ್. ಬೋಸರಾಜು
ಎನ್.ಎಸ್. ಬೋಸರಾಜು   

ರಾಯಚೂರು: ಸಚಿವ ಎನ್. ಎಸ್. ಬೋಸರಾಜು ಅವರ 79ನೇ ಜನ್ಮದಿನದ ಅಂಗವಾಗಿ ಜೂನ್ 21 ರಂದು ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಅಭಿನಂದನಾ ಹಾಗೂ ಚೈತನ್ಯ ಸಾಗರ ಗ್ರಂಥ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಾನ್ವಿ ಶಾಸಕ ಹಂಪಯ್ಯ ನಾಯಕ ಸಾಹುಕಾರ ತಿಳಿಸಿದರು.

ಕಾನೂನು ಸಚಿವ ಎಚ್. ಕೆ. ಪಾಟೀಲ ಉದ್ಘಾಟಿಸುವರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸುವರು. ಗೃಹ ಸಚಿವ ಜಿ. ಪರಮೇಶ್ವರ ಅವರು ಚೈತನ್ಯ ಸಾಗರ ಗ್ರಂಥ ಬಿಡುಗಡೆ ಮಾಡುವರು. ರಾಜ್ಯಸಭಾ ಮಾಜಿ ಸದಸ್ಯ ಎಲ್.ಹನುಮಂತಯ್ಯ ಗ್ರಂಥವನ್ನು ಪರಿಚಯಿಸಲಿದ್ದಾರೆ ಎಂದು ಬುಧವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

ತೆಲಂಗಾಣದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ, ಸಚಿವ ವಾಕಿಟಿ ಶ್ರೀ ಹರಿ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಶಾಂತಪ್ಪ, ಜಿ.ಶಿವಮೂರ್ತಿ, ಅಮರೇಗೌಡ ಹಂಚಿನಾಳ, ಕಿರಲಿಂಗಪ್ಪ, ನರಸಿಂಹಲು ಮಾಡಗಿರಿ, ಬೂದೆಪ್ಪ, ಬಸವರಾಜ ಪಾಟೀಲ ಅತ್ತನೂರು, ಮಂಜುಳಾ ಅಮರೇಶ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.