
ರಾಯಚೂರು: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ಫೆ.4ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಭಾನುವಾರ ಬೆಳಿಗ್ಗೆ 11.30ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಅರ್ಚಕರ ಪುರೋಹಿತರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ನಗರದ ಸಿಯಾತಲಾಬ್ ಬಡಾವಣೆಯಲ್ಲಿ ಇಂದಿರಾ ಬ್ರಿಗೇಡ್ 1, 2, 3ನೇ ಬ್ಯಾಚ್‍ಗಳ ಪ್ರಮಾಣ ಪತ್ರ ವಿತರಣೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5ಕ್ಕೆ ರಂಗಸಿರಿ ಸಾಂಸ್ಕೃತಿಕ ಬಳಗದ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಫೆ.5ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೌರಾಡಳಿತ, ಹಜ್ ಸಚಿವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರೀಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.