
ರಾಯಚೂರು: ‘ಮಹಾ ಪುರುಷರ ಸಂದೇಶಗಳು ಇಂದಿನ ಯುವಪೀಳಿಗೆಗೆ ಆದರ್ಶವಾಗಿವೆ. ತತ್ವಗಳ ಪರಿಪಾಲನೆಯ ಮೂಲಕ ಸಮಾಜದ ಅಭಿವೃದ್ಧಿಗೆ ನೆರವಾಗಬೇಕಿದೆ’ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ನಗರದ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರದಲ್ಲಿ ಬುಧವಾರ ಆಯೋಜಿಸಲಾಗಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರತಿಯೊಬ್ಬರೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಮಾಜವನ್ನು ಸಂಘಟಿಸಿ ಈ ಭಾಗದ ಅಭಿವೃದ್ಧಿಗೂ ನೆರವಾಗಬೇಕು’ ಎಂದು ಹೇಳಿದರು.
ನಗರ ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿ, ‘ಗಂಗಾಮತಸ್ಥರ ಜನಸಂಖ್ಯೆಯೂ ಹೆಚ್ಚುತ್ತಿದೆ. ಅವರಿಗೂ ರಾಜಕೀಯ ಪ್ರಾತಿನಿಧ್ಯ ಸಿಗಬೇಕು. ಈ ದಿಸೆಯಲ್ಲಿ ಸಮಾಜವನ್ನು ಜಾಗೃತಗೊಳಿಸಬೇಕಿದೆ’ ಎಂದು ತಿಳಿಸಿದರು.
ಸಮಾಜದ ಮುಖಂಡ ಕೆ.ಶಾಂತಪ್ಪ ಮಾತನಾಡಿದರು. ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ಜಿಲ್ಲಾಧಿಕಾರಿ ಕೆ.ನಿತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆಯ ಉಪ ಆಯುಕ್ತೆ ಸಂತೋಷಿ ರಾಣಿ, ಸಮಾಜದ ಮುಖಂಡರಾದ ಶರಣಪ್ಪ, ಕುರ್ಡಿ ಲಕ್ಷ್ಮಣ, ರಂಗನಾಥ ದೇಸಾಯಿ, ಕಡಗೋಲ ಶರಣಪ್ಪ, ಲಲಿತಾ ಕಡಗೋಲ, ರಾಜೇಶ್ವರಿ ಉಪಸ್ಥಿತರಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೂ ಮೊದಲು ನಗರದಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಮಾಜದ ಮುಖಂಡರು ಹಾಗೂ ಗಣ್ಯರು ಪಾಲ್ಡೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.