ADVERTISEMENT

ಮಾನ್ವಿ: ಸಚಿವ ಸತೀಶ ಜಾರಕಿಹೊಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 14:19 IST
Last Updated 17 ಜೂನ್ 2025, 14:19 IST
ಮಾನ್ವಿಯಲ್ಲಿ ಕಾಂಗ್ರೆಸ್ ಮುಖಂಡರು ಸಚಿವ ಸತೀಶ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು
ಮಾನ್ವಿಯಲ್ಲಿ ಕಾಂಗ್ರೆಸ್ ಮುಖಂಡರು ಸಚಿವ ಸತೀಶ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು   

ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿದರು.

ನಂತರ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ,‘ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರು ವರೆಗೆ ₹1,695 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು’ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ರವಿ ಬೋಸರಾಜು, ಅಬ್ದುಲ್ ಗಫೂರ್ ಸಾಬ್, ಮಹಾಂತೇಶ ಸ್ವಾಮಿ ರೌಡೂರು, ರಾಜಾ ಸುಭಾಷ್ ಚಂದ್ರ ನಾಯಕ, ಡಿ.ರಾಮಕೃಷ್ಣ, ಜಯಪ್ರಕಾಶ, ಆದಮ್ ಬೇಗ್, ರೆಹಮತ್ ಅಲಿ, ಇದಾಯತ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.