ADVERTISEMENT

ಕರ್ನಾಟಕ ಬಂದ್‌ಗೆ ರಾಯಚೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 5:29 IST
Last Updated 22 ಮಾರ್ಚ್ 2025, 5:29 IST
<div class="paragraphs"><p><strong>ರಾಯಚೂರಲ್ಲಿ ತರಕಾರಿ ಮಾರುಕಟ್ಟೆಗೆ ಬೀಗ ಹಾಕಿದ ಪ್ರಯುಕ್ತ ವ್ಯಾಪಾರಿಗಳು ಬೀದಿಯಲ್ಲಿ ಕುಳಿತು ತರಕಾರಿ ಮಾರಿದರು.</strong></p></div>

ರಾಯಚೂರಲ್ಲಿ ತರಕಾರಿ ಮಾರುಕಟ್ಟೆಗೆ ಬೀಗ ಹಾಕಿದ ಪ್ರಯುಕ್ತ ವ್ಯಾಪಾರಿಗಳು ಬೀದಿಯಲ್ಲಿ ಕುಳಿತು ತರಕಾರಿ ಮಾರಿದರು.

   

ರಾಯಚೂರು: ಮಹಾರಾಷ್ಟ್ರದಲ್ಲಿ ಕನ್ನಡಿಗರ ವಿರುದ್ದ ನಡೆಯುತ್ತಿರುವ ಎಂಇಎಸ್‌ ಹಾಗೂ ಶಿವಸೇನೆ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಯಚೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಕೇಂದ್ರ ಭಾಗದಲ್ಲಿರುವ ಉಸ್ಮಾನಿಯಾ ಸಗಟು ತರಕಾರಿ ಮಾರುಕಟ್ಟೆ ಬಂದ್‌ ಮಾಡಲಾಗಿದೆ. ಮಾರುಕಟ್ಟೆ ಪ್ರದೇಶದಲ್ಲಿರುವ ಕೆಲ ಅಂಗಡಿಗಳು ಮಾತ್ರ ತೆರೆದುಕೊಂಡಿವೆ. ಪ್ರಾಥಮಿಕ ಶಾಲೆಗಳ ಪರೀಕ್ಷೆಗಳು ಮುಗಿದಿರುವ ಕಾರಣ ಮಕ್ಕಳು ಶಾಲೆಗೆ ಬಂದಿಲ್ಲ.

ADVERTISEMENT

ಕೇಂದ್ರ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಎಂದಿನಂತೆ ಇದೆ. ಬಸ್‌ ಸಂಚಾರವೂ ಸಹಜವಾಗಿದೆ. ಆಯ ಕಟ್ಟಿನ ಪ್ರದೇಶದಲ್ಲಿ ಪೊಲೀಸರು ಬಂದೋಬಸ್ತ್‌ನಲ್ಲಿ ನಿರತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.