ADVERTISEMENT

ದೇವದುರ್ಗ | ನರೇಗಾ ಕೆಲಸ ನೀಡಿ ವಲಸೆ ತಡೆಯಿರಿ: ಶಾಸಕಿ ಕರೆಮ್ಮ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2025, 12:40 IST
Last Updated 13 ಫೆಬ್ರುವರಿ 2025, 12:40 IST
ದೇವದುರ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನರೇಗಾ ಯೋಜನೆ ಕಾಯಕ ಬಂದುಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಶಾಸಕಿ ಕರೇಮ್ಮ ಜಿ ನಾಯಕ ಉದ್ಘಾಟಿಸಿದರು.
ದೇವದುರ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನರೇಗಾ ಯೋಜನೆ ಕಾಯಕ ಬಂದುಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಶಾಸಕಿ ಕರೇಮ್ಮ ಜಿ ನಾಯಕ ಉದ್ಘಾಟಿಸಿದರು.   

ದೇವದುರ್ಗ: ಜಿಲ್ಲೆಯಲ್ಲಿಯೇ ತಾಲ್ಲೂಕಿನಲ್ಲಿ ಅತಿ ಹೆಚ್ಚು ಜನ ವಲಸೆ ಹೋಗುತ್ತಿರುವ ಹಿನ್ನೆಲೆ ಕಾಯಕ ಬಂಧುಗಳು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ನರೇಗಾ ನರೇಗಾ ಕೆಲಸ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಶಾಸಕಿ ಕರೆಮ್ಮ ಜೆ. ನಾಯಕ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕಾಯಕ ಬಂಧುಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮೂಹ ಸಂಸ್ಥೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಘಂಟಿ ಮಾತನಾಡಿ, ‘ಅಕ್ರಮ ತಡೆಯಲು ಎನ್ಎಂಎಂಎಸ್ ಆ್ಯಪ್‌ ಮೂಲಕ ಪ್ರತಿದಿನ ಎನ್‌ಎಂಆರ್‌ ಹಾಜರಾತಿ ಕೈಗೊಳ್ಳಲು ಆದೇಶಿದೆ ಕಾಯಕ ಬಂದುಗಳು ಸರ್ಕಾರದ ನಿಯಮಗಳು ಬಗ್ಗೆಯೂ ಕೂಲಿಕಾರ್ಮಿಕರಿಗೆ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಇಒ ಬಸವರಾಜ ಹಟ್ಟಿ ಮಾತನಾಡಿ, ಯೋಜನೆಯ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ತರುವ ನಿಟ್ಟಿನಲ್ಲಿ ರಾಜ್ಯ ಗ್ರಾಮೀಣಾಭಿ ವೃದ್ಧಿ ಇಲಾಖೆಯ ಆಯುಕ್ತರು ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ (ಎನ್ಎಂಎಂಎಸ್) ಆ್ಯಪ್ ಮೂಲಕ ಪ್ರತಿದಿನ ಎರಡು ಬಾರಿ (ಬೆಳಿಗ್ಗೆ 6 ರಿಂದ 10, ಮಧ್ಯಾಹ್ನ 1ರಿಂದ 4 ಗಂಟೆ ಒಳಗೆ) ಕೆಲಸದ ಚಿತ್ರದ ಜೊತೆ ಕೂಲಿಕಾರ್ಮಿಕರ ಹಾಜರಾತಿಯನ್ನು ಅಪ್‌ಲೋಡ್‌ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಯಮಗಳನ್ನು ಕಾರ್ಮಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಗ್ರಾಮ ಸ್ವರಾಜ್ ಅಭಿಯಾನದ ರಾಜ್ಯ ಸಂಯೋಜಕ ಅಶೋಕ ಯರಗಟ್ಟಿ, ನರೇಗಾ ಸಹಾಯಕ ನಿರ್ದೇಶಕ ಅಣ್ಣರಾವ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ (ಪಂ ರಾಜ್) ಮಹೇಶ್ವರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.