ಮಸ್ಕಿ: ‘ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವದಿಯಲ್ಲಿ 31 ಸಾವಿರ ಶಿಕ್ಷಕರ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿತ್ತು’ ಎಂದು ಶಾಸಕ ಆರ್. ಬಸನಗೌಡ ತುರುವಿಹಾಳ ಹೇಳಿದರು.
ವಿಧಾನ ಪರಿಷತ್‌ನ ಈಶಾನ್ಯ ಕ್ಷೇತ್ರದ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ ಪರ ಪಟ್ಟಣದಲ್ಲಿ ಶುಕ್ರವಾರ ನಡೆದ ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳ ಹಾಗೂ ಮುಖ್ಯಸ್ಥರ ಸಭೆಯಲ್ಲಿ ಅವರು ಮಾತನಾಡಿದರು.
‘ಕಾಂಗ್ರೆಸ್ ಸರ್ಕಾರ ಅತಿಥಿ ಶಿಕ್ಷಕರ, ಉಪನ್ಯಾಸಕರ ವೇತನ ಹೆಚ್ಚಿಸಿದೆ. ಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಸಂಸ್ಥೆಗಳಿಗೆ, ಹಾಗೂ ಪದವೀಧರರ ಮತ್ತು ಶಿಕ್ಷಕರ ಶ್ರೇಯೋಭಿವೃದ್ಧಿಯ ದೃಷ್ಟಿಯಿಂದ ಸರ್ಕಾರದ ವತಿಯಿಂದ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶ ಹೊಂದಿದ್ದೇವೆ. ಪ್ರಜ್ಞಾವಂತರಾದ ನೀವು ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ ಅವರಿಗೆ ನೀಡಿ’ ಎಂದು ಕೋರಿದರು.
ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಘಟಕದ ಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ. ಚಿಗರಿ, ಮುಖಂಡರಾದ ಎಂ. ಅಮರೇಶ, ಎಚ್. ಬಿ. ಮುರಾರಿ, ವೀರೇಶ ಪಾಟೀಲ್, ದೊಡ್ಡಪ್ಪ ಕಡಬೂರು, ಶ್ರೀಶೈಲಪ್ಪ ಬ್ಯಾಳಿ, ಮೈಬುಸಾಬ ಮುದ್ದಪೂರ, ಆನಂದ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಖಾಸಗಿ ಸಂಸ್ಥೆಗಳ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.