ಸಿಂಧನೂರು: ತಾಲ್ಲೂಕಿನ ತುರ್ವಿಹಾಳ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಸೋಮವಾರ ದಿಢೀರ್ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿದರು.
ನಂತರ ಮಾತನಾಡಿದ ಅವರು ಪಟ್ಟಣ ಸೇರಿದಂತೆ ವಿವಿಧ ಹಳ್ಳಿಗಳಿಂದ ಬರುವ ಬಾಣಂತಿಯರ ಆರೋಗ್ಯ ತಪಾಸಣೆ ಮಾಡಲು ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರಿಗೆ ಸೂಚಿಸಿದರು.
ಬೇಸಿಗೆ ಕಾಲ ಬರುತ್ತಿದ್ದು ಆಸ್ಪತ್ರೆಯಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲಸೌಕರ್ಯಗಳ ಬಗ್ಗೆ ಗಮನಹರಿಸಬೇಕು. ಸಮಸ್ಯೆಗಳಿದ್ದರೆ ತಮ್ಮ ಗಮನಕ್ಕೆ ತರಬೇಕು ಎಂದು ಹೇಳಿದರು.
ನಂತರ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಚಂದ್ರಶೇಖರಯ್ಯ ಅವರು ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದರು.
ವೈದ್ಯಾಧಿಕಾರಿ ಡಾ.ಮೇರಿ ಭಂಡಾರಿ, ಆಯುಷ್ ವೈದ್ಯಾಧಿಕಾರಿ ಡಾ.ವಿರೂಪಾಕ್ಷಪ್ಪ, ತಾಲ್ಲೂಕು ವಿಬಿಡಿ ಮೇಲ್ವಿಚಾರಕ ಟಿ.ಹಣಗಿ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ತುರ್ವಿಹಾಳ, ಗುಂಜಳ್ಳಿ, ಕಲಮಂಗಿ ಉಪಕೇಂದ್ರಗಳ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.