ADVERTISEMENT

ವಲಸೆ ಕುರಿಗಾರರಿಗೆ ಸಂಚಾರಿ ಟೆಂಟ್: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 22 ಜೂನ್ 2023, 15:52 IST
Last Updated 22 ಜೂನ್ 2023, 15:52 IST

ರಾಯಚೂರು: 2023-24ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ವಲಸೆ ಕುರಿಗಾರರಿಗೆ ಸಂಚಾರಿ ಟೆಂಟ್ ಮತ್ತು ಇನ್ನಿತರ ಪರಿಕರಗಳ ಕಿಟ್‍ಗಳನ್ನು ಉಚಿತವಾಗಿ ಕೊಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಪರಿಶಿಷ್ಠ ಜಾತಿ-4 ಪರಿಶಿಷ್ಠ ಪಂಗಡ-2 ಹಾಗೂ ಸಾಮಾನ್ಯ-14 ಸೇರಿದಂತೆ ಒಟ್ಟು 20 ಫಲಾನುಭವಿಗಳಿಗೆ ಸಂಚಾರಿ ಕಿಟ್‍ಗಳನ್ನು ವಿತರಿಸವ ಗುರಿ ನಿಗದಿಪಡಿಸಲಾಗಿದೆ.

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿಸಿಕೊಂಡಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಮಾತ್ರ ಈ ಯೋಜನೆಯ ಅರ್ಜಿಯನ್ನು ರಾಯಚೂರಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕೊಡಲಾಗುವುದು.

ADVERTISEMENT

ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಜೂನ್ 5ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಪಶು ಆಸ್ಪತ್ರೆ ಅವರಣ ರಾಯಚೂರು ಇಲ್ಲಿ ಸಂಪರ್ಕಿಸಬೇಕು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.