ADVERTISEMENT

ರಾಯಚೂರು: ತುಂತುರು ಮಳೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2023, 7:22 IST
Last Updated 18 ಜುಲೈ 2023, 7:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಯಚೂರು: ಜಿಲ್ಲೆಯ ರಾಯಚೂರು ಗ್ರಾಮಾಂತರ, ಸಿಂಧನೂರು, ಮಾನ್ವಿ, ದೇವದುರ್ಗ, ಕವಿತಾಳ, ಜಾಲಹಳ್ಳಿ, ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ.

ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 2.5 ಮಿ.ಮೀ ಮಳೆಯಾಗಿದೆ.

ಜಿಲ್ಲೆಯಲ್ಲಿ ಪೂರ್ಣಪ್ರಮಾಣದಲ್ಲಿ ಬಿತ್ತನೆಯಾಗಿಲ್ಲ. ನೀರಾವರಿ ಸೌಲಭ್ಯವಿರುವಲ್ಲಿ ಮಾತ್ರ ಬಿತ್ತನೆಯಾಗಿದೆ. ಉಳಿದೆಡೆ ರೈತರು ಭೂಮಿಯನ್ನು ಹದಗೊಳಿಸುವಲ್ಲಿ ನಿರತರಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.