
ಪ್ರಜಾವಾಣಿ ವಾರ್ತೆ
ಮಸ್ಕಿ (ರಾಯಚೂರು ಜಿಲ್ಲೆ): ಸುಕೋ ಸೌಹಾರ್ದ ಸಹಕಾರ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಮೋಹಿತ್ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಳ್ಳಾರಿಯ ಮುಖ್ಯ ಕಚೇರಿಯಲ್ಲಿ ಸೋಮವಾರ ನಡೆದ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಮೋಹಿತ್ ಮಸ್ಕಿ ಅವರನ್ನು ಅಧ್ಯಕ್ಷ ಹಾಗೂ ಮುರಳೀಧರ ರೆಡ್ಡಿ ಪಿ. ಅವರನ್ನು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ವ್ಯವಸ್ಥಾಪಕ ನಿರ್ದೇಶಕ ಜಿ.ಎಸ್.ರವಿ ಸುಧಾಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.