
ಪ್ರಜಾವಾಣಿ ವಾರ್ತೆ
ಮಂತ್ರಾಲಯದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ ಕುಟುಂಬ ಸಮೇತರಾಗಿ ಸುಬುಧೇಂದ್ರ ತೀರ್ಥರ ಆಶೀರ್ವಾದ ಪಡೆದರು
ರಾಯಚೂರು: ಸಂಸದ ರಾಜಾ ಅಮರೇಶ್ವರ ನಾಯಕ ಅವರು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.
ಮೊದಲಿಗೆ ಗ್ರಾಮ ದೇವತೆಯಾದ ಮಂಚಾಲಮ್ಮ ದೇವಿಯ ದರ್ಶನ ಪಡೆದು ನಂತರ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಆರ್ಶೀವಾದ ಪಡೆದರು. ಶ್ರೀಗಳು ಸಂಸದರಿಗೆ ಶಾಲು ಹೊದಿಸಿ ಗೌರವಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.