ADVERTISEMENT

ರಾಜ್ಯಪಾಲರ ಕಚೇರಿ ದುರ್ಬಳಕೆ ಆರೋಪ: ಆ.25ಕ್ಕೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2024, 14:23 IST
Last Updated 23 ಆಗಸ್ಟ್ 2024, 14:23 IST

ಮಸ್ಕಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದನ್ನು ಖಂಡಿಸಿ ಆ.25ಕ್ಕೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸುಮಾರು ಮೂರು ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ’ ಎಂದು ಅಹಿಂದ ಮುಖಂಡ ಹನುಮಂತಪ್ಪ ಮುದ್ದಾಪೂರ, ಹನುಮೇಶ ಬಾಗೋಡಿ ತಿಳಿಸಿದ್ದಾರೆ.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯಪಾಲರು ಆಧಾರ ರಹಿತ ದೂರಿಗೆ ಮಾನ್ಯತೆ ನೀಡಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿಯಾಗಿದೆ’ ಎಂದು ಅವರು ಟೀಕಿಸಿದ್ದಾರೆ.

ಕೆಪಿಸಿಸಿ ಸದಸ್ಯ ಸಿದ್ದನಗೌಡ ಮಾಟೂರು, ಭೂನ್ಯಾಯ ಮಂಡಳಿ ಸದಸ್ಯ ಮಹಾಂತೇಶ ಜಾಲವಾಡಗಿ, ನಾಗಭೂಷಣ, ಚಂದ್ರಶೇಖರ ತಿಡಿಗೋಳ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.