ಹೂನೂರು ಗ್ರಾಮದಲ್ಲಿ ಚರಂಡಿಯಲ್ಲಿ ಸಿಲುಕಿದ ಬಸ್
ಮುದಗಲ್: ಸಮೀಪದ ಹೂನೂರು ಗ್ರಾಮದಲ್ಲಿ ಅಂಕಲಿಮಠ– ಮಂಗಳೂರು ಬಸ್ ಚರಂಡಿಯಲ್ಲಿ ಸಿಲುಕಿಕೊಂಡಿತ್ತು.
ವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡದ ಕಾರಣ ಬಸ್‌ನ ಮುಂದಿನ ಚಕ್ರ ಚರಂಡಿಯಲ್ಲಿ ಸಿಲುಕಿಕೊಂಡಿತ್ತು ಎಂದು ಸ್ಥಳೀಯರು ತಿಳಿಸಿದರು.
‘ರಸ್ತೆ ಬದಿಗೆ ಚರಂಡಿ ನಿರ್ಮಾಣ ಮಾಡಿಲ್ಲ. ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗುತ್ತದೆ. ಅಧಿಕಾರಿಗಳು ಎಚ್ಚೆತ್ತು ಸಿ.ಸಿ ರಸ್ತೆ ಮಾಡಿ ಪ್ರಯಾಣಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಹೂನೂರು ಗ್ರಾಮಸ್ಥರು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.