ಮುದಗಲ್: ಸಮೀಪದ ನಾಗರಾಳ ಗ್ರಾಮದಲ್ಲಿ ಫೆಬ್ರವರಿಯಲ್ಲಿ ನಡೆದ ಕಳ್ಳತನ ಪ್ರಕರಣ ಆರೋಪಿಯನ್ನು ಬಂಧಿಸಿರುವ ಆತನಿಂದ 10 ಗ್ರಾಂ ಚಿನ್ನ, ₹2 ಲಕ್ಷ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗ್ರಾಮದ ಶಂಕ್ರಮ್ಮ ಹಾಗೂ ಅಶೋಕ ಅವರು ತಮ್ಮ ಮನೆಯಲ್ಲಿ ಕಳ್ಳತನವಾದ ಬಗ್ಗೆ ಮುದಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪಿಎಸ್‌ಐ ವೆಂಕಟೇಶ ಮಾಡಗೇರಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪ್ರಕರಣ ಬೆನ್ನತ್ತಿದಪೋಲಿಸರು ಆರೋಪಿ ಶಿವಪ್ಪ ಶೇಖರಪ್ಪ (20) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಿಚಾರಣೆಗೆ ಒಳಪಡಿಸಿದರು.
ಪಿಎಸ್‌ಐ ವೆಂಕಟೇಶ್ ಮಾಡಗೇರಿ, ಎಎಸ್‌ಐ ಮಲ್ಲಯ್ಯ, ಕಾನ್‌ಸ್ಟೆಬಲ್‌ಗಳಾದ ಅಮರೇಶ, ವೆಂಕಟೇಶ, ಹನುಮಂತ, ಅನಿಲ, ಅಜಿಂ ಪಾಶ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.